kalasa

 

 

ಮರಗಸಿ ಮಾಡುವಾಗ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಕಳಸ ತಾಲ್ಲೂಕಿನ ಹಿರೇಬೈಲ್ ಇಡಕಣಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬೂದಿಗುಂಡಿ ಗ್ರಾಮದ ಸುರೇಶ್ (32 ವರ್ಷ) ಮರದಿಂದ ಬಿದ್ದು ಮೃತಪಟ್ಟವರು.

ಇವತ್ತು ಮಧ್ಯಾಹ್ನ 12ರ ಸಮಯದಲ್ಲಿ ಸ್ಥಳೀಯ ತೋಟವೊಂದರಲ್ಲಿ ಮರಗಸಿ ಮಾಡುವಾಗ ಸುರೇಶ್ ಮರದಿಂದ ಆಯಾ ತಪ್ಪಿ ಬಿದ್ದು ಗಾಯಗೊಂಡಿದ್ದರು.

ಅವರನ್ನು ಕಳಸ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ತಲೆಗೆ ತೀವ್ರವಾಗಿ ಗಾಯಗೊಂಡಿದ್ದರಿಂದ ಅವರು ಕೊನೆಯುಸಿರೆಳೆದರು.

ಸುರೇಶ್ ಅವರಿಗೆ ಈಗ್ಗೆ ಎರಡು ವರ್ಷಗಳ ಹಿಂದಷ್ಟೇ ವಿವಾಹವಾಗಿತ್ತು ಮತ್ತು ಒಂದು ತಿಂಗಳ ಮಗುವಿದೆ ಎಂದು ತಿಳಿದುಬಂದಿದೆ. ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ