mes rank

 

 

ಇಂದು ಪ್ರಕಟವಾದ ದ್ವಿತೀಯ ಪಿ.ಯು.ಸಿ. ಫಲಿತಾಂಶದಲ್ಲಿ ಮೂಡಿಗೆರೆ ಮುದ್ರೆಮನೆಯಲ್ಲಿರುವ ಹರೀಶ್  ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಲೇಖನ್ ಪಟೇಲ್   ವಾಣಿಜ್ಯ ವಿಭಾಗದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. 591 ಅಂಕಗಳೊಂದಿಗೆ (ಶೇ 98.5) ಲೇಖನ್ ಪಟೇಲ್ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಹರೀಶ್ ಮಡ್ಡಿಕೆರೆ ಮಾಹಿತಿ ನೀಡಿದ್ದಾರೆ.

ಕಾಲೇಜು ಶೇಕಡಾ 100ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆ ಬರೆದಿದ್ದ ಎಲ್ಲಾ 43 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 20 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ದೀಕ್ಷಿತ್ ಬಿ.ಎಂ. 580 (ಶೇ.96.66) ಅಂಕ ಗಳೀಸಿ ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನ, ರೇಖಾ 576 (ಶೇ. 96) ಅಂಕಗಳೊಂದಿಗೆ ತಾಲ್ಲೂಕಿಗೆ ದ್ವಿತೀಯಾ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಅನನ್ಯ ವಿ. 586 (ಶೇ. 97.66), ಮೌನ್ ಯು.ಎಂ. 584 (ಶೇ 97.33) ಅಂಕಗಳೊಂದಿಗೆ ಕ್ರಮವಾಗಿ ತಾಲ್ಲೂಕಿಗೆ ದ್ವಿತೀಯ ಮತ್ತು ತೃತೀಯ ಸ್ಥಾನ ಗಳಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳ ಈ ಸಾಧನೆಗೆ ಆಡಳಿತ ಮಂಡಳಿ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕ ವೃಂದದವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ