halappagowda

 

 

ಮೂಡಿಗೆರೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ದಿಸಲು ಬಾರಿ ಪೈಪೋಟಿ ಇತ್ತು. ಹೊರಗಿನಿಂದ ಬಂದವರಿಗೆ ಮಣೆಹಾಕದೇ ಸ್ಥಳೀಯರಿಗೆ ಟಿಕೇಟು ನೀಡುವಂತೆ ಪಕ್ಷದ ಕಾರ್ಯಕರ್ತರ ಒತ್ತಾಯವಿದ್ದ ಹಿನ್ನಲೆಯಲ್ಲಿ ನಯನ ಮೋಟಮ್ಮ ಅವರಿಗೆ ಟಿಕೇಟು ದೊರೆತಿದ್ದು ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗೆ ಒಮ್ಮತದಿಂದ ಶ್ರಮಿಸಬೇಕು ಎಂದು ಹಾಲಪ್ಪಗೌಡರು ಕಿವಿಮಾತು ಹೇಳಿದ್ದಾರೆ.

ಮೂಡಿಗೆರೆ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು. ಈ ಬಾರಿ ಚುನಾವಣೆಯಲ್ಲಿ ಕೆಲವರು ವಿವಿಧ ಕಾರಣಗಳಿಗೆ ಅಸಮಧಾನಗೊಂಡಿದ್ದರು. ಸಂಘಟನೆಯಿಂದ ದೂರ ಉಳಿದಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾರ್ಗದರ್ಶನದಲ್ಲಿ ಆಲ್ದೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಹಾಲಿ ಜಿಲ್ಲಾ ಉಪಾಧ್ಯಕ್ಷ ಹವ್ವಳ್ಳಿ ಕೃಷ್ಣೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಅರೆನೂರು ಪ್ರಕಾಶ್ ಅವರ ನೇತೃತ್ವದಲ್ಲಿ ವಿವಿಧ ಹೋಬಳಿಗಳಲ್ಲಿ ಅಸಮಧಾನಗೊಂಡಿದ್ದ ನೂರಾರು ಕಾರ್ಯಕರ್ತರನ್ನು ಮನವೊಲಿಸಿ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಳ್ಳವಂತೆ ಪ್ರೇರೇಪಿಸಲಾಗಿದೆ. ಎಲ್ಲರೂ ಉತ್ಸಾಹದಿಂದ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೇಸ್ ಗೆಲುವು ನಿಶ್ಚಿತವೆಂದು ಹಾಲಪ್ಪಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಜಿ. ಸುರೇಂದ್ರ, ಎಂ.ಎಸ್.ಅನಂತು, ಹವ್ವಳ್ಳಿ ಕೃಷ್ಣೇಗೌಡ, ಅರೆನೂರು ಪ್ರಕಾಶ್, ಸಂಪತ್. ಚಂದ್ರು ಒಡೆಯರ್, ಸಿ.ಬಿ.ಶಂಕರ್ ಸೇರಿದಂತೆ ವಿವಿಧ ಘಟಕಗಳ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ