car accident

 

 

ಕಾರು ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ನಿಶ್ಚಿತಾರ್ಥಕ್ಕೆಂದು ಭದ್ರಾವತಿಗೆ ತೆರಳುತ್ತಿದ್ದ ದಂಪತಿ ಸ್ಥಳದಲ್ಲೆ ಸಾವನ್ನಪ್ಪಿ, ಮಕ್ಕಳಿಬ್ಬರು ಗಾಯಗೊಂಡಿರುವ ದಾರುಣ ಘಟನೆ ತರೀಕೆರೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾರಿನ ಚಾಲಕ ಶ್ರೀನಿವಾಸ್‌ (45) ಮತ್ತು ಪತ್ನಿ ಶ್ವೇತಾ (40) ಆಪಘಾತದಲ್ಲಿ ಮೃತಪಟ್ಟ ದಂಪತಿ ಎಂದು ಪೊಲೀಸರು ತಿಳಿಸಿದ್ದಾರೆ.

ತರೀಕೆರೆ ಪಟ್ಟಣದ ಸಮೀಪ ಬೆಟ್ಟತಾವರೆ ಕೆರೆ ಬಳಿ ಬರುತ್ತಿದ್ದಾಗ ಇವರು ಪ್ರಯಾಣಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಶ್ರೀನಿವಾಸ್‌ ಮತ್ತು ಶ್ವೇತಾ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರೊಂದಿಗೆ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಅವರನ್ನು ಶಿವಮೊಗ್ಗ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಭದ್ರಾವತಿಗೆ ನಿಶ್ಚಿತಾರ್ಥ ಕಾರ್ಯಕ್ಕೆಂದು ತೆರಳುತ್ತಿದ್ದಾಗ ಈ ಆವಘಡ ಸಂಭವಿಸಿದೆ. ಇವರು ಇನ್ನು ಇಪ್ಪತ್ತು ಕಿಲೋ ಮೀಟರ್‌ನಷ್ಟುದೂರ ಪ್ರಯಾಣಿಸಿದ್ದರೆ ಇವರು ಸೇರಬೇಕಿದ್ದ ಭದ್ರಾವತಿ ತಲುಪುತ್ತಿದ್ದರು. ಅಷ್ಟರಲ್ಲಿ ಈ ಅಪಘಾತ ಸಂಭವಿಸಿದೆ.

ಈ ಸಂಭಂದ ತರೀಕೆರೆ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದರ್ಪಣ ನ್ಯೂಸ್ ಗ್ರೂಪ್ ಸೇರಲು ಈ ಕೆಳಗಿನ ಲಿಂಕ್ ಒತ್ತಿ?

https://chat.whatsapp.com/DDXjmfQaBa0HJQqmKf7y89

***”
Subscribe to our YouTube channel

https://youtube.com/@darpanackm3920

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ