bjp

 

 

ರಾಜ್ಯದಲ್ಲಿ ಅಭಿವೃದ್ಧಿ ಕಾಣಬೇಕೆಂದರೆ ಬಿ.ಜೆ.ಪಿ. ಡಬಲ್ ಎಂಜಿನ್ ಸರಕಾರದಿಂದ ಮಾತ್ರ ಸಾಧ್ಯ. ಹಾಗಾಗಿ ಮತದಾರರು ಬಿಜೆಪಿಗೆ ಮತ ಚಲಾಯಿಸುವ ಮೂಲಕ ಮತ್ತೊಮ್ಮೆ ಬಜೆಪಿ ಅಧಿಕಾರಕ್ಕೆ ತರಬೇಕೆಂದು ಮೂಡಿಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಮನವಿ ಮಾಡಿದರು.

ಶನಿವಾರ ಅವರು ಕಸಬಾ ಹೋಬಳಿ ಮಾಕೋನಹಳ್ಳಿ ಗ್ರಾಮದಲ್ಲಿ ನಡೆಸಿದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರಕಾರವು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದೆ. ಮಹಿಳೆಯರ, ದೀನ ದಲಿತರು ಮತ್ತು ಮಧ್ಯಮ ವರ್ಗದ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಅದನ್ನು ಯಶಸ್ವಿಯಾಗಿ ಜನಸಾಮಾನ್ಯರ ಮನೆ ಮನೆಗೆ ತಲುಪಿಸಲಾಗಿದೆ. ಮುಖ್ಯವಾಗಿ ಇಡೀ ವಿಶ್ವವೇ ಕೋವಿಡ್ ನಿಂದ ತತ್ತರಿಸಿದಾಗ ಭಾರತದಲ್ಲಿ ಉಚಿತ ವ್ಯಾಕ್ಸಿನ್ ಮತ್ತು ಆರೋಗ್ಯ ಸೇವೆಯನ್ನು ನೀಡಿ ಜನರ ಜೀವ ಉಳಿಸಿ ಇಡೀ ವಿಶ್ವಕ್ಕೆ ಮಾದರಿ ದೇಶ ಎನಿಸಿಕೊಂಡಿತು ಎಂದು ಹೇಳಿದರು.

ರಸ್ತೆ, ವಸತಿ, ವಿದ್ಯುತ್, ಶಿಕ್ಷಣ, ಮಹಿಳಾ ಸಬಲಿಕರಣ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಬದಲಾವಣೆ ಮೂಲಕ ಜನರಿಗೆ ಮಾದರಿ ಆಡಳಿತ ನೀಡಿದೆ. ಕಾಂಗ್ರೆಸ್ ಸರಕಾರ ಈ ಹಿಂದೆ ರಾಜ್ಯವನ್ನು ಕೊಳ್ಳೆ ಹೊಡೆದಿದ್ದಲ್ಲದೇ ಮತ್ತೊಮ್ಮೆ ರಾಜ್ಯವನ್ನು ದಿವಾಳಿಗೆ ನೂಕಲು ತಯಾರಾಗಿದೆ. ಇದನ್ನು ತಡೆಯಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಮೂಡಿಗೆರೆ ಕ್ಷೇತ್ರದ ಬಗ್ಗೆ ನಾನು ಅನೇಕ ಕನಸುಗಳನ್ನು ಕಂಡಿದ್ದೇನೆ. ದಶಕಗಳಿಂದ ಕ್ಷೇತ್ರದ ಜನರ ನಾಡಿಮಿಡಿತ ಅರಿತಿದ್ದೇನೆ. ಜನರು ಆಶೀರ್ವಾದ ಮಾಡಿ ನನ್ನನ್ನು ವಿಧಾನಸಭೆಗೆ ಕಳುಹಿಸಿಕೊಟ್ಟರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.

ತಾ.ಪಂ. ಮಾಜಿ ಅಧ್ಯಕ್ಷ ಕೆ.ಸಿ..ರತನ್, ಮುಖಂಡರಾದ ಎಂ.ಎಲ್. ಕಲ್ಲೇಶ್, ಕೆ.ಎನ್. ಕೃಷ್ಣೇಗೌಡ, ಡಿ.ಎಸ್.ಸುರೇಂದ್ರ, ಮನೋಜ್ ಹಳೆಕೋಟೆ, ಸುನೀಲ್ ಪುರ, ಜೈರಾಮ್, ಸಂದೀಪ್, ಮಂಜು, ವಿಜಯ್‍ಕುಮಾರ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ