sampatha jayaram

 

 

ಕನ್ನಡ ಕಿರುತೆರೆ ಮತ್ತು ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದ ಸಂಪತ್ ಜಯರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅವರು ಬೆಂಗಳೂರಿನ ನೆಲಮಂಗಲದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35ರ ವಯಸ್ಸಿನ ಸಂಪತ್ ನಮ್ಮ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸಮೀಪದ ಸಿಗದಾಲು ಗ್ರಾಮದವರು.

ನಟನೆಯಲ್ಲಿ ಆಸಕ್ತಿ ಬೆಳೆಸಿಕೊಂಡು ಬೆಂಗಳೂರು ಸೇರಿದ್ದ ಸಂಪತ್ ಕನ್ನಡ ಕಿರುತೆರೆಯ ಅನೇಕ ಧಾರಾವಾಹಿಗಳಲ್ಲಿ ಸಹನಟನಾಗಿ, ಮಿಲನ್ ಪಾತ್ರಗಳಲ್ಲಿ ನಟಿಸಿದ್ದರು. ಹೆಸರಾಂತ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಪ್ರಮುಖ ನಟನಾಗಿದ್ದರು.

ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ, ಕಂಬ್ಳಿಹುಳ ಮುಂತಾದ ಸಿನಿಮಾಗಳಲ್ಲಿಯೂ ನಟಿಸಿದ್ದರು.

ಸಮಾಜಸೇವಾ ಕಾರ್ಯಗಳಲ್ಲಿಯೂ ಸಂಪತ್ ಜಯರಾಜ್ ಗುರುತಿಸಿಕೊಂಡಿದ್ದರು. ಕಳೆದ ವರ್ಷವಷ್ಟೇ ಸಂಪತ್ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ವಿವಾಹವಾಗಿ ಒಂದು ವರ್ಷಕ್ಕೆ ಅವರ ಬದುಕು ದುರಂತ ಅಂತ್ಯ ಕಂಡಿದೆ.

ಇತ್ತೀಚಿನ ದಿನಗಳಲ್ಲಿ ಸಂಪತ್ ನಟನೆಯಲ್ಲಿ ಸೂಕ್ತ ಅವಕಾಶಗಳ ಕೊರತೆಯಿಂದ ನೊಂದಿದ್ದರು ಎಂದು ಹೇಳಲಾಗುತ್ತಿದೆ. ಸ್ನೇಹಜೀವಿಯಾಗಿದ್ದ ಸಂಪತ್ ಅವರ ನಿಧನಕ್ಕೆ ಕಿರುತೆರೆ ಸೆಲೆಬ್ರಿಟಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

ಸಂಪತ್ ಅವರ ಅಂತ್ಯಸಂಸ್ಕಾರ ಇಂದು ಅವರ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ