ninga

 

 

ಮಾಜಿ ಸಚಿವ, ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಇಂದು ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ.

ನಿಂಗಯ್ಯ ಕಾಂಗ್ರೇಸ್ ಸೇರ್ಪಡೆ ಆಗುತ್ತಿರುವ ಬಗ್ಗೆ ಪತ್ರಿಕೆ ಈಗಾಗಲೇ ವರದಿ ಪ್ರಕಟಿಸಿತ್ತು. ಇಂದು ಬೆಂಗಳೂರಿನ ಕೆ.ಪಿ.ಸಿ.ಸಿ. ಕಛೇರಿಯಲ್ಲಿ ನಿಂಗಯ್ಯ ಕಾಂಗ್ರೇಸ್ ಸೇರಿದ್ದು, ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೇಸ್ ಬಾವುಟ ನೀಡುವುದರ ಮೂಲಕ ನಿಂಗಯ್ಯನವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿ.ಹೆಚ್. ಹಾಲಪ್ಪಗೌಡ, ಕೆ.ಆರ್. ಪ್ರಭಾಕರ್ ಸೇರಿದಂತೆ ಮೂಡಿಗೆರೆ ಕ್ಷೇತ್ರದ ಅನೇಕ ಹಿರಿಯ ಕಾಂಗ್ರೇಸ್ ಮುಖಂಡರು ಉಪಸ್ಥಿತರಿದ್ದರು.

ಮೂಡಿಗೆರೆ ಕ್ಷೇತ್ರದಲ್ಲಿ ಜೆ.ಡಿ.ಎಸ್. ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡಿದ್ದ ಬಿ.ಬಿ.ನಿಂಗಯ್ಯ ನಿನ್ನೆ ತಮ್ಮ ಬೆಂಬಲಿಗರ ಸಭೆ ನಡೆಸಿ ಅಂತಿಮವಾಗಿ ಜೆ.ಡಿ.ಎಸ್. ತೊರೆದು ಕಾಂಗ್ರೇಸ್ ಪಕ್ಷವನ್ನು ಸೇರಲು ನಿರ್ಧಾರ ಕೈಗೊಂಡಿದ್ದರು.

ಇದೇ ಸಂದರ್ಭದಲ್ಲಿ ಚಿತ್ರನಟ ಶಿವರಾಜ್ ಕುಮಾರ್ ಅವರ ಧರ್ಮಪತ್ನಿ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಸಹ ಕಾಂಗ್ರೇಸ್ ಪಕ್ಷವನ್ನು ಸೇರಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ