DC-KN-Ramesh-1

ಜಿಲ್ಲಾಧಿಕಾರಿ ಕೆ.ಎನ್. ರಮೇಶ್

 

 

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಾಳೆ ನಡೆಯಲಿದ್ದು ಮುಂಜಾಗ್ರತ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಯು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿಯಲ್ಲಿ ನಿಷೇಧ ಆಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ ಆರ್ ರಮೇಶ್ ಅವರು ಆದೇಶ ಹೊರಡಿಸಿದ್ದಾರೆ.

ನಾಳೆ ಬೆಳಿಗ್ಗೆ 6:00 ಯಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಈ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ವಿಜಯೋತ್ಸವ ಸಭೆ ಸಮಾರಂಭಗಳನ್ನು ಆಯೋಜಿಸುವುದನ್ನು, ಪಟಾಕಿ ಸಿಡಿಸುವುದನ್ನು, ಮಾರಕಾಸ್ತ್ರ ಹಿಡಿದು ತಿರುಗುವುದನ್ನು ನಿಷೇಧಿಸಲಾಗಿದೆ.

ಚುನಾವಣೆ ಫಲಿತಾಂಶದ ನಂತರ ವಿಜಯೋತ್ಸವದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆ ನಡೆಯುವ ಸಂಭವವಿರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಮದುವೆ ಮತ್ತು ಇತರ ಪೂರ್ವನಿಯೋಜಿತ ಶುಭ ಸಮಾರಂಭಗಳಿಗೆ ಯಾವುದೇ ನಿಬಂಧನೆಗಳು ಇರುವುದಿಲ್ಲ. ಇದನ್ನು ಹೊರತುಪಡಿಸಿ ಉಳಿದೆಡೆ ಐದು ಜನರಿಗಿಂತ ಹೆಚ್ಚಿನ ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಜೊತೆಗೆ ಮದ್ಯ ಮಾರಾಟದ ಮೇಲು ನಿಷೇಧ ಹೇರಲಾಗಿದೆ.

ನಾಳೆ ಬೆಳಿಗ್ಗೆ 8 ಗಂಟೆಯಿಂದ IDSG ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ ಎಣಿಕೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ