nazarath 2

 

 

ಐ.ಸಿ.ಎಸ್.ಇ ಬೋರ್ಡ್ ನ ಹತ್ತನೇ ತರಗತಿ ಫಲಿತಾಂಶ ಪ್ರಕಟಗೊಂಡಿದ್ದು ಮೂಡಿಗೆರೆ ತಾಲ್ಲೂಕಿನ ಬಣಕಲ್ ನ ನಜರತ್ ಶಾಲೆ ಸತತ ಹನ್ನೊಂದನೇ ವರ್ಷವೂ ಶೇಕಡಾ ನೂರರಷ್ಟು ಫಲಿತಾಂಶ ಪಡೆದಿದೆ.

ಪರೀಕ್ಷೆಯಲ್ಲಿ ಹಾಜರಾದ 39 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಹಾಗೂ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡು ಶಾಲೆಗೆ ಕೀರ್ತಿ ತಂದಿದ್ದಾರೆ.

ತಾಲ್ಲೂಕಿನ ಸಬ್ಬೇನಹಳ್ಳಿ ಅರವಿಂದ ಹಾಗೂ ಭೂಮಿಕಾರವರ ಪುತ್ರಿ ಅಹಾನ ಎನ್. ಎ ಶೇಕಡಾ 98 ಅಂಕಗಳೊಂದಿಗೆ ಚಿಕ್ಕಮಗಳೂರು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

ಬೇಲೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಶಾಂತ ಕುಮಾರ್ ಮತ್ತು ಅನಿತಾರವರ ಪುತ್ರಿ ಹಿತೈಷಿ ಎಸ್. ಪಿ ಶೇಕಡಾ 97.20 ಅಂಕಗಳೊಂದಿಗೆ ದ್ವಿತೀಯ ಹಾಗೂ ಮೂಡಿಗೆರೆ ತಾಲ್ಲೂಕಿನ ಕುಂದೂರು ಗ್ರಾಮದ ಗಣೇಶ್ ಮತ್ತು ಉಷಾರವರ ಪುತ್ರಿ ಅಭಿಷ್ಟ ಕೆ. ಜಿ ಶೇಕಡಾ 97 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ.

ಇವರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ