laxmangowda

 

 

ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆ.ಡಿ.ಎಸ್. ಪಕ್ಷದ ಕಳಪೆ ಸಾಧನೆಯಿಂದ ಬೇಸತ್ತು ಮತ್ತು ಪಕ್ಷದ ಕೆಲ ನಾಯಕರ ಒಗ್ಗಟ್ಟಿನ ಕೊರತೆಯ ಕಾರಣವನ್ನು ನೀಡಿ ಪಕ್ಷದ ತಾಲ್ಲೂಕು ಅಧ್ಯಕ್ಷ ಲಕ್ಷ್ಮಣಗೌಡ ಬಾಳೂರು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ಮೂಡಿಗೆರೆ ಕ್ಷೇತ್ರದಲ್ಲಿ ಎಂ.ಪಿ. ಕುಮಾರಸ್ವಾಮಿಯವರು ಜೆ.ಡಿ.ಎಸ್. ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಹಗಲಿರುಳು ಶ್ರಮಿಸಿದ್ದೇನೆ. ಪಕ್ಷದ ಅಭ್ಯರ್ಥಿಯ ಪರವಾಗಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಕಳೆದ ಎಂಟು ವರ್ಷಗಳಿಂದ ಪಕ್ಷದ ತಾಲ್ಲೂಕು ಅಧ್ಯಕ್ಷನಾಗಿ ಜಾತ್ಯಾತಿತವಾಗಿ ಎಲ್ಲಾ ಸಮುದಾಯದವರನ್ನು ಒಟ್ಟುಗೂಡಿಸಿ ಜೊತೆಜೊತೆಯಾಗಿ ಸಂಘಟನೆ ಮಾಡಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಬಂದಿರುತ್ತೇನೆ ನಮ್ಮ ಪಕ್ಷದ ಅಭ್ಯರ್ಥಿ ಯಾದ ಕುಮಾರಸ್ವಾಮಿ ಅವರನ್ನು ಮುಖಂಡರು ಕಾರ್ಯಕರ್ತರು ಸೇರಿ ಒಗ್ಗಟ್ಟಿನಿಂದ ಗೆಲ್ಲಿಸಬೇಕಿತ್ತು ಅದು ಸಾಧ್ಯವಾಗಲಿಲ್ಲ. ಒಗ್ಗಟ್ಟಿಲ್ಲದ ಕಾರಣ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವಲ್ಲಿ ವಿಫಲವಾಗಿದ್ದು, ಇದರಿಂದ ಬೇಸತ್ತು ತಾಲ್ಲೂಕು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಇನ್ನೂ ಮುಂದೆ ಪಕ್ಷದ ಸಾಮಾನ್ಯ ಕಾರ್ಯಕರ್ತನ್ನಾಗಿ ಮುಂದುವರೆಯಲು ಇಚ್ಛೆಸುತ್ತೇನೆ ಎಂದಿದ್ದಾರೆ.

ಮೂಡಿಗೆರೆ ಕ್ಷೇತ್ರ ಕಾಂಗ್ರೇಸ್ ತೆಕ್ಕೆಗೆ


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ