IMG-20230521-WA0021

 

 

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ ವೇಳೆ ಸಮುದ್ರದ ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕ ಟಿ.ಸಿ.ಮಧುರಾಜ್ ಗೌಡ (23ವರ್ಷ) ಮೂಡಿಗೆರೆ ತಾಲೂಕಿನ ಪಲ್ಗುಣಿ ಸಮೀಪದ ತುಂಬರಗಂಡಿಯ ಕೃಷಿಕರಾದ ಚಂದ್ರೆಗೌಡ ಮತ್ತು ಸುನಂದ ದಂಪತಿಗಳ ಪುತ್ರ.

ಮೈಸೂರಿನಲ್ಲಿ ಎಂ.ಬಿ.ಎ.ವ್ಯಾಸಂಗ ಮಾಡುತ್ತಿದ್ದ ಮಧುರಾಜ್ ಶನಿವಾರ ಸ್ನೇಹಿತರೊಂದಿಗೆ ಪ್ರವಾಸ ತೆರಳಿದ್ದರು. ಮುರುಡೇಶ್ವರ ಸಮುದ್ರದಲ್ಲಿ ವಿಹರಿಸುತ್ತಿದ್ದಾಗ ಅಲೆಯ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಕೊನೆಯುಸಿರೆಳೆದಿದ್ದಾರೆ.

ಮಧುರಾಜ್ ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 11ಗಂಟೆಗೆ ತುಂಬರಗಂಡಿಯಲ್ಲಿ ನೆರವೇರಿದೆ.

ಏಕೈಕ ಪುತ್ರನನ್ನು ಕಳೆದುಕೊಂಡ ಪೋಷಕರು ದಿಕ್ಕುತೋಚದೆ ದುಃಖದ ಮಡುವಿನಲ್ಲಿ  ಮುಳುಗಿದ್ದಾರೆ.

**************

ಈಗ್ಗೆ ಎರಡು ದಿನಗಳ ಹಿಂದೆ ಶೃಂಗೇರಿ ಸಮೀಪ ಇಬ್ಬರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದರು.

ಇತ್ತೀಚೆಗೆ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪುವ ಘಟನೆಗಳು ಹೆಚ್ಚುತ್ತಿವೆ. ಈ ಬಗ್ಗೆ ಎಷ್ಟೇ ಮುನ್ನೆಚ್ಚರಿಕೆ ನೀಡಿದರು ಸಹ ಅವಘಡಗಳು ಕಡಿಮೆಯಾಗುತ್ತಿಲ್ಲ. ಪೋಷಕರು ಮತ್ತು ಶಿಕ್ಷಕರು ಈ ಬಗ್ಗೆ ಮಕ್ಕಳಿಗೆ ಹೆಚ್ಚಿನ ಎಚ್ಚರಿಕೆ ನೀಡಬೇಕು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ