ಭಾರತ ದೇಶಕ್ಕೆ ನೂತನ ಸಂಸತ್ ಭವನವನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಿದರು.
ನೂತನ ಸಂಸತ್ ಭವನ ಉದ್ಘಾಟನೆ ನಿಮಿತ್ತ ಇಂದು ಬೆಳಗ್ಗೆಯಿಂದಲೇ ವಿವಿಧ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು.
ಸಂಸತ್ ಭವನದ ಧಾರ್ಮಿಕ ಕಾರ್ಯಕ್ರಮಗಳನ್ನು ಶೃಂಗೇರಿ ಮಠದ ಅರ್ಚಕರು ನೆರವೇರಿಸಿದರು ಎಂಬುದು ವಿಶೇಷವಾಗಿತ್ತು.

ನೂತನ ಸಂಸತ್ ಭವನದಲ್ಲಿ ರಾಜಧರ್ಮದ ಪ್ರತೀಕವಾದ ಸೆಂಗೋಲ್ ಅನ್ನು ಲೋಕಸಭಾ ಸಭಾಪತಿ ಸ್ಥಾನದ ಪಕ್ಕದಲ್ಲಿ ಪ್ರತಿಷ್ಟಾಪಿಸಲಾಯಿತು.
ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಉದ್ಘಾಟನಾ ಕಾರ್ಯದಲ್ಲಿ ಸಾಥ್ ನೀಡಿದರು.
ತದನಂತರ ನೂತನ ಸಂಸತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸತ್ ಸದಸ್ಯರು, ಸಚಿವರುಗಳು, ಗಣ್ಯಾತಿಗಣ್ಯರು ಉಪಸ್ಥಿತರಿದ್ದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಉಪಸ್ಥಿತಿ ವಿಶೇಷವಾಗಿ ಗಮನ ಸೆಳೆಯಿತು.
ಸಂಸತ್ ಭವನ ಉದ್ಘಾಟನೆಯನ್ನು ರಾಷ್ಟ್ರಪತಿಗಳಿಂದ ಮಾಡಿಸಬೇಕು ಎಂದು ಆಗ್ರಹಿಸಿ ಕಾಂಗ್ರೇಸ್ ಸೇರಿದಂತೆ ಅನೇಕ ರಾಜಕೀಯ ಪಕ್ಷಗಳು ಸಂಸತ್ ಭವನ ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದ್ದವು.
ಪ್ರಧಾನಿ ನರೇಂದ್ರ ಮೋದಿಯವರು ಕನಸಿನ ಯೋಜನೆ ಸೆಂಟ್ರಲ್ ವಿಸ್ತಾ ಅಡಿಯಲ್ಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಲ್ಲಾ ಪ್ರಮುಖ ಆಡಳಿತ ಕಛೇರಿಗಳನ್ನು ಒಂದೇ ಪ್ರದೇಶದಲ್ಲಿ ನಿರ್ಮಾಣ ಮಾಡಬೇಕು ಎಂಬ ಮಹತ್ವಾಕಾಂಕ್ಷೆಯ ಅಂಗವಾಗಿ ಇದೀಗ ಆರಂಭದಲ್ಲಿ ದೇಶದ ಆಡಳಿತ ಶಕ್ತಿಕೇಂದ್ರ ಸಂಸತ್ ಭವನ ನಿರ್ಮಾಣವಾಗಿ ಕಾರ್ಯಾರಂಭಕ್ಕೆ ಸಿದ್ಧವಾಗಿದೆ,



