ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾಮಾನ್ಯ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ.

ನಿನ್ನೆ ಅವರು ಸಾರಿಗೆ ಇಲಾಖೆಯ ನಾಲ್ಕು ವಿಭಾಗಗಳ ಅಧಿಕಾರಿಗಳ ಜೊತೆ ನಡೆಸಿದ ಸಭೆಯ ಬಳಿಕ ಈ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
ಬಿ.ಪಿ.ಎಲ್, ಎ.ಪಿ.ಎಲ್ ಎಂಬ ನಿಬಂಧನೆಗಳಿಲ್ಲದೇ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾಮಾನ್ಯ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುವುದು, ಜೂನ್ 1ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ.
ಸಾರಿಗೆ ಇಲಾಖೆಯ ಅಧಿಕಾರಿಗಳು ತಯಾರಿಸಿರುವ ಅಂಕಿಅಂಶಗಳ ಸಹಿತ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಾಗುವುದು. ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕಾಂಗ್ರೇಸ್ ಜನರಿಗೆ ನೀಡಿದ ಭರವಸೆಯಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಸಾಮಾನ್ಯ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಎಂದಿದ್ದಾರೆ.



