ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕ ಮಹಿಳೆ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲ್ಲೂಕಿನ ಪಂಡರವಳ್ಳಿ ಎಂಬಲ್ಲಿ ಈ ಘಟನೆ ನಡೆದಿದೆ. ಗಿರಿತಪ್ಪಲಿನಲ್ಲಿ ಬರುವ ಪಂಡರವಳ್ಳಿಯ ಕಾಫಿ ತೋಟದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದ್ದು, ಮಹಿಳೆ ಗಂಭೀರ ಗಾಯಗೊಂಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಲಿ ಮಹಿಳೆಯ ಮೇಲೆ ದಾಳಿ ಮಾಡಿದ್ದು ಆಗ ಸುತ್ತಲಿನ ಕಾರ್ಮಿಕರು ಕೂಗಿಕೊಂಡಿದ್ದರಿಂದ ಮಹಿಳೆ ಪಾರಾಗಿದ್ದಾರೆ.
ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಕಾರ್ಮಿಕ ಮಹಿಳೆಯನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹುಲಿ ದಾಳಿಯಿಂದ ಹಣೆ ಮತ್ತು ಮುಖಕ್ಕೆ ಗಂಭೀರ ಗಾಯವಾಗಿದೆ.
ಈಗ್ಗೆ ಎಂಟು ವರ್ಷದ ಹಿಂದೆ ಪಂಡರವಳ್ಳಿಯಲ್ಲಿ ಹುಲಿಗೆ ಮಹಿಳೆ ಒಬ್ಬರು ಬಲಿಯಾಗಿದ್ದರು, ಇದೀಗ ಮತ್ತೆ ಹುಲಿ ದಾಳಿಯಾಗಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಜಾವಳಿ : ವಿಜೃಂಭಣೆಯಿಂದ ನಡೆದ ಮಹಾಗಣಪತಿ ಸ್ವಾಮಿ ಹಾಗೂ ನಾಗದೇವರ ಅಷ್ಟಬಂಧ ಪುನರ್ ಪ್ರತಿಷ್ಠಾಪನೆ



