Screenshot_20230612_203027_copy_370x304

 

 

 

ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಘಟನೆ ಚಿಕ್ಕಮಗಳೂರು ನಗರದಲ್ಲಿ ನಡೆದಿದೆ.

ಕಳ್ಳರು ವೇಗವಾಗಿ ಬೈಕಿನಲ್ಲಿ ಬಂದು ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯ ಕೊರಳಲ್ಲಿದ್ದ ಸರ ಎಗರಿಸಿ ಪರಾರಿಯಾಗಿದ್ದಾರೆ.

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ಇಂದು ಹಾಡಹಗಲೇ ಈ ಘಟನೆ ನಡೆದಿದೆ.

ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ನಿವಾಸಿ ಲೀಲಾವತಿ ಎಂಬುವವರು ಸರ ಕಳೆದುಕೊಂಡವರು.

ಸುಗ್ಗಿಕಲ್ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಸರಗಳ್ಳರು‌ ಬೈಕಿನಲ್ಲಿ ಅತ್ತ ಇತ್ತ ತಿರುಗಿ ಸಮೀಪದಲ್ಲಿ ಬೇರೆ ಯಾರು ಇಲ್ಲದ ಸ್ಥಳದಲ್ಲಿ ಅಜ್ಜಿಯ ಬಳಿ ವಿಳಾಸ ಕೇಳುವ ರೀತಿಯಲ್ಲಿ ನಾಟಕವಾಡಿದ್ದಾರೆ.

ಒಬ್ಬ ಸವಾರ ಬೈಕಿನಿಂದ ಇಳಿದು ಮಹಿಳೆಯ  ಕುತ್ತಿಗೆಯಲ್ಲಿದ್ದ ಸರವನ್ನು ಎಳೆದು ಕಿತ್ತಿದ್ದು ಇಬ್ಬರು ಬೈಕ್ ಏರಿ ಪರಾರಿಯಾಗಿದ್ದಾರೆ.

ಸರವನ್ನು ಎಳೆದು ಕಿತ್ತ ರಭಸಕ್ಕೆ ಮಹಿಳೆ ಕೆಳಗೆ ಬಿದ್ದಿದ್ದಾರೆ.

ಸರಗಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ

ಹಾಡಹಗಲೇ ಚಿನ್ನದ ಸರ ಕಳ್ಳತನ ಹಿನ್ನೆಲೆಯಲ್ಲಿ ನಗರದ ಮಹಿಳೆಯರು ಆತಂಕ್ಕೆ ಒಳಗಾಗಿದ್ದಾರೆ.

ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ