kole

 

 

ಯುವತಿಯೊಬ್ಬಳು ತಾಯಿಯನ್ನು ಹತ್ಯೆಗೈದು ಮೃತದೇಹವನ್ನು ಸೂಟ್‍ಕೇಸ್‍ನಲ್ಲಿ ಹಾಕಿಕೊಂಡು ಬೆಂಗಳೂರು ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆಗೆ ತಂದಿರುವ ಘಟನೆಯೊಂದು ಮಂಗಳವಾರ ಬೆಳಗ್ಗೆ ವರದಿಯಾಗಿದೆ.

ಸೆನಾಲಿ ಸೇನ್ (39) ಕೊಲೆ ಆರೋಪಿಯಾಗಿದ್ದು, ಬೀವಾಪಾಲ್(70)ಕೊಲೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ.ಇವರು ಮೂಲತಃ ಕೊಲ್ಕತ್ತಾ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು ನಗರದ ಬಿಳೇಹಳ್ಳಿಯ ಎಸ್.ಎಸ್.ಆರ್ ಗ್ರೀನ್ ಅಪಾರ್ಟ್‍ಮೆಂಟ್‍ನಲ್ಲಿ ಒಂದೇ ಫ್ಲ್ಯಾಟ್‍ನಲ್ಲಿ ಪುತ್ರಿ ಸೆನಾಲಿ ಸೇನ್,ತಾಯಿ ಬೀವಾ ಪಾಲ್ ಮತ್ತು ಸೆನಾಲಿಯ ಅತ್ತೆ ವಾಸವಾಗಿದ್ದರು ಎನ್ನಲಾಗಿದೆ. ಸೆನಾಲಿ ಸೇನ್ ತಾಯಿ ಮತ್ತು  ಅತ್ತೆ ನಡುವೆ ಸದಾ ಜಗಳವಾಗುತಿತ್ತು ಎನ್ನಲಾಗಿದೆ.

ಇದರಿಂದ ಮನನೊಂದು ತಾಯಿಯನ್ನು ಕೊಲೆ ಮಾಡಿರುವುದಾಗಿ  ಆಕೆ ಪೊಲೀಸರ ಬಳಿ ಹೇಳಿದ್ದಾಳೆ.

ತಾಯಿಗೆ ಮೊದಲು ನಿದ್ರೆ ಮಾತ್ರೆ ನೀಡಿದ್ದು,ಹೊಟ್ಟೆ ನೋವು ಎಂದು ಕೂಗಲು ಆರಂಭಿಸಿದಾಗ ವೇಲ್‍ನಿಂದ ಕತ್ತನ್ನು ಹಿಸುಕಿ ಕೊಂದಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು,ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ