nitte 3_page-0001

 

 

ತುಂಗಾ ನದಿಯಲ್ಲಿ ಮುಳುಗಿ ಇಂಜಿನಿಯರ್ ಕಾಲೇಜಿನ ಇಬ್ಬರು ಉಪನ್ಯಾಸಕರು  ಮೃತಪಟ್ಟಿರು ದಾರುಣ ಘಟನೆ ನಡೆದಿದೆ.

ತೀರ್ಥಹಳ್ಳಿ ಸಮೀಪದ ತೀರ್ಥಮತ್ತೂರು ಎಂಬಲ್ಲಿ ದುರ್ಘಟನೆ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಇಂಜಿನಿಯರ್ ಕಾಲೇಜಿನ ಉಪನ್ಯಾಸಕರುಗಳಾದ ಪುನಿತ್ (38 ವರ್ಷ) ಮತ್ತು ಬಾಲಾಜಿ (36ವರ್ಷ) ತುಂಗಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟ ನತದೃಷ್ಟರು.

ನಿನ್ನೆ ತೀರ್ಥಹಳ್ಳಿ ಸಮೀಪದ ತೀರ್ಥಮತ್ತೂರು ಕ್ಷೇತ್ರಕ್ಕೆ  ನಿಟ್ಟೆ ಕಾಲೇಜಿನ ಏಳೆಂಟು ಉಪನ್ಯಾಸಕರ ತಂಡ ಪ್ರವಾಸ ಬಂದಿತ್ತು ಎನ್ನಲಾಗಿದೆ.

ಹೋಂ ಸ್ಟೇ ಒಂದರಲ್ಲಿ ತಂಗಿದ್ದ ತಂಡದ ಸದಸ್ಯರು  ಇಂದು ಮುಂಜಾನೆ ತುಂಗಾ ನದಿಯಲ್ಲಿ ಸ್ನಾನ ಮಾಡಲು ಮುಂದಾದಾಗ ಓರ್ವ ಉಪನ್ಯಾಸಕ ನೀರಿನಲ್ಲಿ ಮುಳುಗಿದ್ದು ಅವರನ್ನು ರಕ್ಷಿಸಲು ಹೋದ ಮತ್ತೋರ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿದು ಬಂದಿದೆ.

ಓರ್ವರ ಮೃತದೇಹ ಪತ್ತೆಯಾಗಿದ್ದು ಮತ್ತೋರ್ವರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮತ್ತು ಅಗ್ನಿಶಾಮಕ ದಳದವರು ಸ್ಥಳೀಯರ ನೆರವಿನೊಂದಿಗೆ ಮೃತದೇಹದ ಹುಡುಕಾಟದಲ್ಲಿ ತೊಡಗಿದ್ದಾರೆ.


Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ