nidhi 1

 

 

ಚಿಕ್ಕಮಗಳೂರು ತಾಲ್ಲೂಕಿನ ಆಣೂರು ಸಮೀಪದ ಕೇಸರಿಕೆ ಎಂಬಲ್ಲಿ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ  25 ಅಡಿ ಆಳ ಗುಂಡಿ ತೋಡಿರುವ ಘಟನೆ ನಡೆದಿದೆ.

25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಿದ್ದು, ಕಿಡಿಗೇಡಿಗಳು ನಿಧಿಗಾಗಿ ಮಧ್ಯರಾತ್ರಿಯಲ್ಲಿ ಪೂಜೆ ಮಾಡಿರುವ ಘಟನೆ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

 

ಮಧ್ಯರಾತ್ರಿ ಊರಾಚೆಗಿನ ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು ಒಟ್ಟಾಗಿ ಸ್ಥಳಕ್ಕೆ ತೆರಳಿದ್ದು, ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದುಬಂದಿದೆ.

ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿವೆ.

 

ಉಡುಪಿ ಜಿಲ್ಲೆ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ಬಂದಿದ್ದ ನಿಧಿ ಶೋಧದ ತಂಡ ಗ್ರಾಮಸ್ಥರನ್ನು ಕಂಡು ಪರಾರಿಯಾಗಿದ್ದಾರೆ. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಈ ಘಟನೆ ನಡೆದಿದೆ.

ವಾಹನಗಳ ಜಾಡು ಹಿಡಿದು ತನಿಖೆ ನಡೆಸಿದರೆ ಪೊಲೀಸರು ಕಿಡಿಗೇಡಿಗಳನ್ನು ಪತ್ತೆಹಚ್ಚಬಹುದಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ