IMG-20230624-WA0042

 

 

ನಾನು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಈ ಕುರಿತು ಮಾಧ್ಯಮಗಳಲ್ಲಿ ಬರುತ್ತಿರುವ ವರದಿ ಸತ್ಯಕ್ಕೆ ದೂರವಾದುದು ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.

ನಾನು ಬಳ್ಳಾಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಷಯವನ್ನು ತಪ್ಪಾಗಿ ಅರ್ಥೈಸಲಾಗಿದೆ. ಪಕ್ಷದ ಸೋಲಿನ ನೈತಿನ ಹೊಣೆ ಹೊರಲು ಸಿದ್ಧ ಎಂದಿದ್ದೇನೆ ಹೊರತು ರಾಜೀನಾಮೆ ಪ್ರಸ್ತಾಪ ಮಾಡಿಲ್ಲ ಎಂದು ಹೇಳಿದ್ದಾರೆ.

4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿ ಇದ್ದೇನೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ.

ಇಂದು ಮಧ್ಯಾಹ್ನದಿಂದ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್ ಕುಮಾರ್ ಕಟೀಲ್ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ಬಿತ್ತರವಾಗಿ, ಎಲ್ಲೆಡೆ ವೈರಲ್ ಆಗಿತ್ತು.

ಸುದ್ದಿ ಬಿತ್ತರವಾದ ನಂತರ ನಳೀನ್ ಕುಮಾರ್ ಕಟೀಲ್ ಅವರು ಈ ಸ್ಪಷ್ಟನೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ