mane 2

 

 

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಕಳೆದ ಒಂದು ವಾರದಿಂದ ಒಂದೇ ಸಮನೆ ಸುರಿಯುತ್ತಿರುವ ಮಳೆ ಅನೇಕ ಕಡೆ ಅನಾಹುತ ಸೃಷ್ಟಿಸಿದೆ. ಮಲೆನಾಡಿನ ಬಹುತೇಕ ಕಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಸ್ತೆಗಳಿಗೆ ಅಲ್ಲಿಲ್ಲಿ ಮಣ್ಣುಕುಸಿತವಾಗಿದೆ. ಅನೇಕ ಕಡೆ ಸಂಚಾರ ವ್ಯತ್ಯಯ ಉಂಟಾಗಿದೆ.

ಮಳೆಗಾಳಿಯಿಂದ ಅನೇಕ ಕಡೆ ಮನಗಳು ಕುಸಿದು ಬಿದ್ದಿವೆ. ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಲುಮರ ಗ್ರಾಮದ ಈರಯ್ಯ ಎಂಬುವವರ ಮನೆ ಸೋಮವಾರ ರಾತ್ರಿ ಸುರಿದ ಮಳೆಗೆ ಪೂರ್ಣ ಖಜಂಗೊಂಡಿದೆ.

ಮೂಡಿಗೆರೆ ತಾಲ್ಲೂಕಿನ ಹೆಸಗಲ್ ಗ್ರಾಮದ ಗೀತಾ ಎಂಬುವವರ ಮನೆ ಮಳೆಯಿಂದ ಕುಸಿದಿದೆ. ಸ್ಥಳಕ್ಕೆ ಸರ್ಕಾರಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಗ್ಗಲಮಕ್ಕಿ ಗ್ರಾಮದ ಕುಮಾರ್ ಎಂಬುವವರ ಮನೆ ಶನಿವಾರ ರಾತ್ರಿ ಸುರಿದ ಮಳೆಗೆ ಜಖಂ ಗೊಂಡಿದೆ. ಇನ್ನು ಅನೇಕ ಕಡೆ ಮನೆಗಳು ಭಾಗಶಃ ಜಖಂಗೊಂಡಿರುವ ಬಗ್ಗೆ ವರದಿಯಾಗುತ್ತಿದೆ.

ಇಂದು ಮತ್ತು ನಾಳೆಯೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ಇದೆ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ