elephant 2_page-0001

 

 

ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಸಿದ್ಧಾಪುರ ಸಮೀಪ ಬಡಗ ಮಾಲ್ತಾರೆ ಮಟ್ಟಂ ಎಂಬಲ್ಲಿ ಸೋಮವಾರ ಕಾಡಾನೆಯೊಂದು ದಾಳಿ ಮಾಡಿ ಮಹಿಳೆಯನ್ನು ಸಾಯಿಸಿದೆ.

ಮೃತ ಮಹಿಳೆಯನ್ನು ಐಶಾ (65) ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಗ್ಗೆ ಮನೆಯ ಸಮೀಪ ವಾಯು ವಿಹಾರ ಮಾಡುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ್ದು ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

ಘಟನೆಯನ್ನು ಖಂಡಿಸಿ, ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

ನಿಲ್ಲದ ಸಾವಿನ ಸರಣಿ : ಈಗ್ಗೆ ಒಂದು ವಾರದ ಹಿಂದಷ್ಟೇ ಈ ಭಾಗದಲ್ಲಿಯೇ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು, ಈಗ್ಗೆ ನಾಲ್ಕೈದು ದಿನಗಳ ಹಿಂದಷ್ಟೇ ಸಕಲೇಶಪುರ ತಾಲ್ಲೂಕಿನಲ್ಲಿ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ ಮತ್ತೊಂದು ಜೀವ ಕಾಡಾನೆ ದಾಳಿಗೆ ಬಲಿಯಾಗಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ