SUCIDE

 

 

ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ನಗರದಲ್ಲಿ ನಡೆದಿದೆ

ಮಡಿಕೆರಿ ಅರಣ್ಯ ಇಲಾಖೆಯಲ್ಲಿ ಉಪವಲಯ ಅರಣ್ಯ ಅಧಿಕಾರಿ(DRFO)ಯಾಗಿ ಸೇವೆ ಸಲ್ಲಿಸುತ್ತಿದ್ದ ಯುವ ಅಧಿಕಾರಿ ರಶ್ಮಿ (27 ವರ್ಷ) ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ.

ಮಂಡ್ಯ ಮೂಲದ ರಶ್ಮಿ ಕಳೆದ ಎರಡು ವರ್ಷಗಳಿಂದ ಮಡಿಕೇರಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ.

ನಿನ್ನೆ ರಾತ್ರಿ ಎಂದಿನಂತೆ ತನ್ನ ಡ್ಯೂಟಿ ಮುಗಿಸಿ ಅರಣ್ಯ ವಸತಿ ಗೃಹದಲ್ಲಿ ತಂಗಿದ್ದ ರಶ್ಮಿ ಬೆಳಗ್ಗೆ ತುಂಬಾ ಹೊತ್ತಾದರೂ ಹೊರಗೆ ಬಾರದೇ ಇದ್ದಾಗ ಅನುಮಾನಗೊಂಡು ಕೊಠಡಿಯನ್ನು ಪರೀಶಿಲಿಸಿದಾಗ  ಕೊಠಡಿಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಹೇಳಲಾಗುತ್ತಿದೆ. ಆದರೆ ಸಾವಿನ ಬಗ್ಗೆ ಅನುಮಾನಗಳು ಇದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮಡಿಕೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಾರೆ ಉತ್ತಮ ಸರ್ಕಾರಿ ಸೇವೆಯಲ್ಲಿದ್ದ ಯುವ ಅಧಿಕಾರಿ ಯಾಕಾಗಿ ಸಾವಿಗೆ ಶರಣಾದರೂ, ಸಾವಿಗೆ ಕಾರಣವೇನು ಎಂಬುದು ತನಿಖೆಯಿಂದ ಹೊರಬರಬೇಕಷ್ಟೇ.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ