tarikere

 

 

ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲ್ಲೂಕಿನಲ್ಲಿ ಈ ಅವಘಡ ಸಂಭವಿಸಿದೆ. ನಿನ್ನೆ ರಾತ್ರಿ ಈ ಅಪಘಾತ ಸಂಭವಿಸಿದೆ.

ತರೀಕೆರೆ ತಾಲ್ಲೂಕಿನ ಬೇಲೆನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಶಿವಮೊಗ್ಗ ಕಡೆಯಿಂದ ತರೀಕೆರೆ ಕಡೆಗೆ ಬರುತ್ತಿದ್ದ ಸಾರಿಗೆ ಬಸ್ ಮತ್ತು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿದ್ದ ಇನ್ನೋವ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 9 ಮಂದಿಗೆ ಗಂಭೀರ ಗಾಯಗಳಾಗಿದ್ದು, ಕೆಲವರ ಸ್ಥಿತಿ ತೀರಾ ಗಂಭೀರವಾಗಿದೆ ಎನ್ನಲಾಗಿದೆ.

ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಶಿವಮೊಗ್ಗ  ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ