ಮೂಡಿಗೆರೆ ನಗರದ ಅಡ್ಯಂತಾಯ ರಂಗಮಂದಿರದಲ್ಲಿ ಪ್ರತಿಷ್ಠಾಪಿಸಲ್ಪಡುವ ಸಾರ್ವಜನಿಕ ಶ್ರೀ ಮಹಾಗಣಪತಿ ಸೇವಾ ಸಮಿತಿಗೆ ಅಧ್ಯಕ್ಷರಾಗಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಪಿ.ಜಿ. ಅನುಕುಮಾರ್ (ಪಟ್ಟದೂರು ಪುಟ್ಟಣ್ಣ) ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ಮೂಡಿಗೆರೆ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ವಿಧಾನಪರಿಷತ್ ಉಪಸಭಾಪತಿ ಎಂ.ಕೆ .ಪ್ರಾಣೇಶ್ ರವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಅನುಕುಮಾರ್ ಅವರನ್ನು ಸಮಿತಿಯ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಭೆಯನ್ನು ದ್ದೇಶಿಸಿ ಮಾತನಾಡಿದ ಉಪಸಭಾಪತಿ ಪ್ರಾಣೇಶ್, ನೂತನ ಅಧ್ಯಕ್ಷರು ಮತ್ತು ಪದಾ ಧಿಕಾರಿಗಳನ್ನು ಎಲ್ಲರ ಒಪ್ಪಿಗೆ ಪಡೆದು ಆಯ್ಕೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ಎಲ್ಲರೂ ಪಾಲ್ಗೊಂಡು ಯಶಸ್ವಿಯಾಗಿ ನಡೆಸುವುದರ ಜತೆಗೆ ವಿಸರ್ಜನಾ ಕಾರ್ಯಕ್ರಮ ರಾತ್ರಿ 12 ಗಂಟೆ ಒಳಗಾಗಿ ಮುಗಿಸುವಂತೆ ಸಲಹೆ ನೀಡಿದರು.
ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಅನುಕುಮಾರ್ ಮಾತನಾಡಿ. ಈ ಕಾರ್ಯಕ್ರಮ ಸಾರ್ವಜನಿಕವಾಗಿದ್ದು ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಭಾಗವಹಿಸಬೇಕು ಮತ್ತು ಎಲ್ಲಾ ಪದಾಧಿಕಾರಿಗಳು ಸದಸ್ಯರು ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕು ಎಂದರು.
ಕಾರ್ಯಧ್ಯಕ್ಷರಾದ ಕೆ ಸಿ ರತನ್, ಪ್ರಧಾನ ಕಾರ್ಯದರ್ಶಿ ಪಟೇಲ್ ಮಂಜುನಾಥ್, ಖಜಾಂಚಿ ಪ್ರವೀಣ್ ಕುಮಾರ್ , ಸಮಿತಿ ಸದಸ್ಯರು, ವಿವಿಧ ರಾಜಕೀಯ ಪಕ್ಷಗಳ ಮತ್ತು ಸಂಘಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.




