muralidar

 

 

ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸೈ ಜಿ.ಕೆ.ಮುರುಳಿಧರ್ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇಂದು ಬೆಳಗ್ಗಿನ ಜಾವ ಮುರುಳಿಧರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಕಳಸದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ತಕ್ಷಣ ಕಳಸ ಖಾಸಾಗಿ ಆಸ್ಪತ್ರೆಗೆ ಕರೆದುಕೊಂಡಿ ಬರಲಾಗಿತ್ತು.ಆದರೆ ಕೆಲವೇ ಹೊತ್ತಿನಲ್ಲಿ ಅವರು ಅಸು ನೀಗಿದ್ದಾರೆ.

ಮೂಲತಃ ಬೀರೂರಿನವರಾಗಿದ್ದ ಇವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ, ಶೃಂಗೇರಿ, ಕುದುರೆಮುಖ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಕಳಸ ಠಾಣೆಯಲ್ಲಿ ಎ.ಎಸೈ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮುರುಳಿಧರ್ ಅವರ ನಿವೃತ್ತಿಗೆ ಇನ್ನು ಕೇವಲ 11 ತಿಂಗಳು ಬಾಕಿಯಿತ್ತು ಎಂದು ತಿಳಿದುಬಂದಿದೆ. ಇವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ದಕ್ಷ ಅಧಿಕಾರಿಯಾಗಿದ್ದ ಮುರುಳಿಧರ್ ಸ್ನೇಹಜೀವಿಯಾಗಿದ್ದರು. ಅವರ ನಿಧನಕ್ಕೆ ಕಳಸ ಠಾಣೆಯ ಠಾಣಾಧಿಕಾರಿ,  ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ. ಮುರಳಿಧರ್ ಅವರ ಪಾರ್ಥೀವ ಶರೀರವನ್ನು ಇಲಾಖೆಯ ಸಕಲ ಗೌರವದೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗುತ್ತದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ