ganapathi1

 

 

ಚಿಕ್ಕಮಗಳೂರು ಸಮೀಪದಲ್ಲಿ ಗಣಪತಿ ವಿಸರ್ಜನೆ ವೇಳೆ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ  ನಡೆದಿದೆ.

ಚಿಕ್ಕಮಗಳೂರು ಸಮೀಪದ ಕರುಬರಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಗಣಪತಿ ವಿಸರ್ಜನ ಮಹೋತ್ಸವ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಗ್ರಾಮ ಯುವಕ ಗಣೇಶ್ (25 ವರ್ಷ) ಗಣೇಶ ಮೂರ್ತಿಯನ್ನು ಗ್ರಾಮದ ಕೆರೆಯಲ್ಲಿ ವಿಸರ್ಜನೆ ಮಾಡುವಾಗಿ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಕತ್ತಲೆಯಲ್ಲಿ ಗಣೇಶ ವಿಸರ್ಜನೆ ಮಾಡುವಾಗ ನೂಕುನುಗ್ಗಲಿನಲ್ಲಿ ಗಣೇಶ್ ಆಕಸ್ಮಿಕವಾಗಿ ಕೆರೆಯಲ್ಲಿ ಮುಳುಗಿದ್ದು, ಮೇಲೆ ಬರಲಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ಬಗ್ಗೆ ಪೊಲೀಸ್ ಇಲಾಖೆ ಎಷ್ಟೆಲ್ಲಾ ಮುನ್ನೆಚ್ಚರಿಕೆ ನೀಡುತ್ತಿದ್ದರೂ ಸಹ ಇಂತಹ ಅವಘಡಗಳು ಪ್ರತಿವರ್ಷ ಮರುಕಳಿಸುತ್ತಿರುವುದು ದುರಾದೃಷ್ಟಕರವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ