September 15, 2026
;
mpk 2

 

 

ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಕಾಂಗ್ರೇಸ್ ಪಕ್ಷ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

ಕಳೆದ ಕೆಲ ದಿನಗಳಿಂದ ಕುಮಾರಸ್ವಾಮಿ ಕಾಂಗ್ರೇಸ್ ಸೇರ್ಪಡೆಯಾಗುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಅದಕ್ಕೆ ಪುಷ್ಠಿ ನೀಡುವಂತೆ ನಿನ್ನೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಕುಮಾರಸ್ವಾಮಿಯವರು ಅಧಿಕೃತವಾಗಿ ಯಾವುದೇ ಹೇಳಿಕೆ ನಿಡಿಲ್ಲವಾದರು ಸಹ ಅವರು ಕೆಲ ದಿನಗಳಲ್ಲಿ ಅಧಿಕೃತವಾಗಿ ಕಾಂಗ್ರೇಸ್ ಪಕ್ಷವನ್ನು ಸೇರ್ಪಡೆಯಾಗುವುದು ಖಚಿತ ಎಂದು ಅವರ ಆಪ್ತ ವಲಯದಿಂದ ತಿಳಿದುಬಂದಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದ ಅವರಿಗೆ ಬಿ.ಜೆ.ಪಿ. ಟಿಕೆಟ್ ಕೊನೆಯ ಕ್ಷಣದಲ್ಲಿ ಕೈತಪ್ಪಿದ ಪರಿಣಾಮ ತರಾತುರಿಯಲ್ಲಿ ಜೆ.ಡಿ.ಎಸ್. ಪಕ್ಷವನ್ನು ಸೇರಿ ಜೆ.ಡಿ.ಎಸ್. ಆಭ್ಯರ್ಥಿಯಾಗಿ ಕ್ಷೇತ್ರದಲ್ಲಿ ಸ್ಪಧಿಸಿದ್ದರು. ಆದರೆ ನಿರೀಕ್ಷಿತ ಮತಗಳಿಸಲು ಸಾಧ್ಯವಾಗದೇ ಮೂರನೇ ಸ್ಥಾನ ಗಳಿಸಿದ್ದರು.

ಇದೀಗ ರಾಜ್ಯದಲ್ಲಿ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಹೊಂದಾಣಿಕೆಗೆ ಮುಂದಾಗಿವೆ. ಜೆ.ಡಿ.ಎಸ್. ಅಧಿಕೃತವಾಗಿ ಎನ್.ಡಿ.ಎ. ಅಂಗಪಕ್ಷವಾಗಿ ಸೇರ್ಪಡೆಯಾಗಿದೆ. ಈ ಬೆಳವಣಿಗೆ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ವಿಪ್ಲವಕ್ಕೆ ಕಾರಣವಾಗುತ್ತಿದೆ. ಜೆ.ಡಿ.ಎಸ್. ಮತ್ತು ಬಿ.ಜೆ.ಪಿ. ಯ ಅನೇಕ ಮಾಜಿ ಶಾಸಕರುಗಳು ಕಾಂಗ್ರೇಸ್ ಪಕ್ಷವನ್ನು ಸೇರಲು ಆಸಕ್ತಿ ತೆಳೆಯುತ್ತಿದ್ದಾರೆ.

ಕುಮಾರಸ್ವಾಮಿಯವರು ಸಹ ಕಾಂಗ್ರೇಸ್ ಸೇರುವುದು ಖಚಿತವಾಗಿದೆ. ಈಗಾಗಲೇ ಬಿ.ಜೆ.ಪಿ. ಮುಖಂಡರೊಂದಿಗೆ ಅವರು ಮುನಿಸಿಕೊಂಡು ಹೊರನಡೆದಿರುವುದರಿಂದ ಮತ್ತು ವೈಯುಕ್ತಿಕ ಟೀಕೆಯ ಮಟ್ಟಕ್ಕೆ ಭಿನ್ನಾಭಿಪ್ರಾಯಗಳು ಇರುವುದರಿಂದ ಅವರು ಮತ್ತೆ ಬಿ.ಜೆ.ಪಿ. ಜೊತೆ ಸೇರಲು ಸೂಕ್ತ ವಾತಾವರಣ ಕಂಡುಬರುತ್ತಿಲ್ಲ. ಮತ್ತೊಂದೆಡೆ ಹಾಲಿ ಮೂಡಿಗೆರೆಯಲ್ಲಿ ಕಾಂಗ್ರೇಸ್ ನ ನಯನ ಮೋಟಮ್ಮ ಅವರು ಶಾಸಕರಾಗಿರುವುದರಿಂದ ಕುಮಾರಸ್ವಾಮಿಯವರಿಗೆ ಕ್ಷೇತ್ರದಲ್ಲಿ ಭವಿಷ್ಯದಲ್ಲಿಯೂ ಯಾವುದೇ ಅವಕಾಶಗಳು ದೊರಕುವುದು ಕಷ್ಟ. ಹಾಗಾಗಿ ಕಾಂಗ್ರೇಸ್ ಪಕ್ಷಕ್ಕೆ ಸೇರಿ ರಾಜ್ಯಮಟ್ಟದಲ್ಲಿ ಸಕ್ರಿಯವಾಗಿರಲು ಅವರು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗಳಿಸಿಬೇಕೆಂಬ ಇರಾದೆಯಲ್ಲಿ ಅಖಾಡ ಸಜ್ಜುಗೊಳಿಸುತ್ತಿರುವ ಕಾಂಗ್ರೇಸ್ ಪಕ್ಷ ಗರಿಷ್ಠ ಮಟ್ಟದಲ್ಲಿ ಇತರೆ ಪಕ್ಷಗಳ ನಾಯಕರನ್ನು ಮಾಜಿ ಶಾಸಕರನ್ನು ಸೆಳೆಯುವ ಯತ್ನ ನಡೆಸುತ್ತಿದೆ. ಇದರ ಅಂಗವಾಗಿ ಮೊನ್ನೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಜೊತೆಗೂಡಿ ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಮತ್ತು ಶಿರಹಟ್ಟಿ ಮಾಜಿ ಶಾಸಕ ರಾಮಪ್ಪ ಲಮಾಣಿ ಕೆ.ಪಿ.ಸಿ.ಸಿ.ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಮಾಡಿ ಪಕ್ಷ ಸೇರ್ಪಡೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಕಾಂಗ್ರೇಸ್ ಪಕ್ಷಕ್ಕೆ ಸೇರಲು ಮುಂದಾಗಿರುವ ಎಲ್ಲ ಮುಖಂಡರನ್ನು ಒಂದೇ ವೇದಿಕೆಯಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲು ಕಾಂಗ್ರೇಸ್ ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ.

ಎಂ.ಪಿ. ಕುಮಾರಸ್ವಾಮಿಯವರು ಕಾಂಗ್ರೇಸ್ ಪಕ್ಷ ಸೇರಿದರೆ ಅದರ ಪರಿಣಾಮ ಮೂಡಿಗೆರೆ, ಚಿಕ್ಕಮಗಳೂರು ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಾರೆ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ರಾಜ್ಯದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳಿಗೆ ಅಖಾಡ ಸಜ್ಜಾಗುತ್ತಿದೆ.

 

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
;