November 2, 2026
;
mane kusitha new_page-0001

 

 

ಮಲೆನಾಡಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ಪಶ್ಚಿಮ ಘಟಕ್ಕೆ ಹೊಂದಿಕೊಂಡಂತೆ ಇರುವ ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಮೂಡಿಗೆರೆ ತಾಲ್ಲೂಕಿನಲ್ಲಿ ಎರಡು ಮನೆಗಳು ಕುಸಿದಿವೆ. ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಗೋಣಿಬೀಡು ಹೋಬಳಿಯ ಚಿನ್ನಿಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಣಜೂರು ಗ್ರಾಮದಲ್ಲಿ ದಿನೇಶ್ ಎಂಬುವವರು ಮನೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಕುಸಿದಿದೆ. ಹಾಗೆಯೇ ಬಾಳೂರು ಹೋಬಳಿ  ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗೂರು ಗ್ರಾಮದಲ್ಲಿ ಮನೆಯೊಂದು ಕುಸಿದಿದೆ.

ಮೇಗೂರು ಗ್ರಾಮದ ರಾಮಯ್ಯ ಎಂಬುವವರ ಮನೆ ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯ ಗೋಡೆ ಮತ್ತು ಮೇಲ್ಚಾವಣಿ ಬಹುತೇಕ ಕುಸಿದು ಬಿದ್ದಿದೆ. ಈ ಸಮಯದಲ್ಲಿ ಮನೆಯವರು ಒಳಗಡೆಯೇ ಇದ್ದರು ಎಂದು ತಿಳಿದುಬಂದಿದ್ದು. ಮನೆಯವರೆಲ್ಲರೂ ಪ್ರಾಣಪಾಯದಿಂದ ಪಾರಾಗಿದ್ದಾರೆ.

 

ಸ್ಥಳಕ್ಕೆ ಕಂದಾಯ ಮತ್ತು ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅವರ ಮನೆಗೆ ತಾತ್ಕಾಲಿಕ ರಕ್ಷಣೆಗಾಗಿ ಟಾರ್ಪಲ್ ಹೊದಿಸಲು ವ್ಯವಸ್ಥೆ ಮಾಡಿರುತ್ತಾರೆ. ಕುಟುಂಬದವರನ್ನು ಪಕ್ಕದ ಮನೆಗೆ ಸ್ಥಳಾಂತರಿಸಿರುತ್ತಾರೆ.

ಇನ್ನೂ ಎರಡು ಮೂರು ದಿನ ನಿರಂತರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

 

Leave a Reply

Your email address will not be published. Required fields are marked *