auto palti

 

 

ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ರಸ್ತೆಯಿಂದ ಕಂದಕಕ್ಕೆ ಮಗುಚಿಬಿದ್ದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಬಳಿ ಮಂಗಳೂರು ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಆಟೋದಲಿದ್ದ ಇಬ್ಬರಿಗೂ ತೀವ್ರ ಪೆಟ್ಟಾಗಿದ್ದು  ಚಾಲಕನ ಸ್ಥಿತಿ ಗಂಭೀರವಾಗಿದ್ದು  ಆಸ್ಪತ್ರೆಗೆ ರವಾನಿಸಲಾಗಿದೆ.

ಪಲ್ಟಿಯಾದ ಆಟೋ ಬೆಳ್ತಂಗಡಿ ಮೂಲದೆಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಜಾವಗಲ್ ಗೆ ತೆರಳಿದ್ದ ಆಟೋ ಬೆಳ್ತಂಗಡಿಗೆ ವಾಪಾಸಾಗುತ್ತಿತ್ತು ಎಂದು ತಿಳಿದುಬಂದಿದೆ.

ಬೆಳ್ತಂಗಡಿ ತಾಲೂಕಿನ  ನಜೀರ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ.   ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ನೇರವಾದ ರಸ್ತೆಯಲ್ಲಿ ಆಟೋ ರಸ್ತೆಯನ್ನು ಬಿಟ್ಟು ಪಕ್ಕದ ಗದ್ದೆಗೆ ಮಗುಚಿ ಬಿದ್ದಿದೆ. ಅತಿಯಾದ ವೇಗದಿಂದ ಆಟೋ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎನ್ನಲಾಗಿದೆ. ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ