ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲ್ಲೂಕು ರೈತ ಘಟಕದ ಅಧ್ಯಕ್ಷರಾಗಿ ಯುವ ಜನತಾದಳದ ಮುಖಂಡ ಹರ್ಷಿತ್ ಕಡೂರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಕಡೂರು ತಾಲೂಕು ಅಧ್ಯಕ್ಷರಾಗಿ ಸತೀಶ್ ಅವರನ್ನು ಆಯ್ಕೆ ಮಾಡಲಾಗಿದೆ.
ನಿನ್ನೆ ಕಡೂರು ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ರೈತ ಘಟಕದ ಅಧ್ಯಕ್ಷರಾಗಿ ಹರ್ಷಿತ್ ಮತ್ತು ಕಡೂರು ತಾಲ್ಲೂಕು ಘಟಕ ಅಧ್ಯಕ್ಷರಾಗಿ ಸತೀಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಜಿಲ್ಲಾ ಅಧ್ಯಕ್ಷರಾದ ರಮೇಶ್ ಅವರು ಉಪಸ್ಥಿತರಿದ್ದು ನೂತನ ಪದಾಧಿಕಾರಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಹರ್ಷಿತ್ ಕಡೂರು ತಾಲ್ಲೂಕಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಜವಾಬ್ದಾರಿಯನ್ನು ನೀಡಿರುವುದಕ್ಕೆ ಜಿಲ್ಲಾ ಅಧ್ಯಕ್ಷರು, ತಾಲ್ಲೂಕು ಅಧ್ಯಕ್ಷರು ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ಕಡೂರು ತಾಲ್ಲೂಕಿನಲ್ಲಿ ರೈತಾಪಿ ವರ್ಗದ ಯುವಕರನ್ನು ಸಂಘಟನೆಗೆ ಹೆಚ್ಚು ಸದಸ್ಯತ್ವ ಮಾಡಿ ನಾಡು ನುಡಿ ಮತ್ತು ರೈತರ ಸಮಸ್ಯೆಗಳ ಪರವಾಗಿ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಹೋರಾಟ ರೂಪಿಸುವುದಾಗಿ ತಿಳಿಸಿದ್ದಾರೆ.



